Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:8 - ಕನ್ನಡ ಸತ್ಯವೇದವು J.V. (BSI)

8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಾಬಿಲೋನ್ ಬೀಳುವುದು; ಬೇಗನೆ ಮುರಿದುಹೋಗುವುದು. ಅದರ ಸಲುವಾಗಿ ಗೋಳಾಡಿರಿ. ಅದರ ನೋವಿಗಾಗಿ ಔಷಧಿಯನ್ನು ತೆಗೆದುಕೊಂಡು ಬನ್ನಿ, ಒಂದುವೇಳೆ ಅದು ಗುಣಹೊಂದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:8
20 ತಿಳಿವುಗಳ ಹೋಲಿಕೆ  

ಐಗುಪ್ತಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಮದ್ದನ್ನು ಉಪಯೋಗಿಸುವದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ಇಗೋ, ಸವಾರರು, ಜೋಡಿ ಜೋಡಿಯಾಗಿ ಬರುತ್ತಾರೆ ಎಂದು ಕೂಗಿ ಇನ್ನೂ ಹೇಳಿದ್ದೇನಂದರೆ - ಬಾಬೆಲ್ ಬಿತ್ತು, ಬಿತ್ತು! ಅದರ ದೇವತಾವಿಗ್ರಹಗಳನ್ನು ಒಡೆದು ನೆಲಸಮಮಾಡಿಬಿಟ್ಟರು ಎಂಬದೇ.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ಅರಿಚಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.


ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ?


ಮೇದ್ಯಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.


ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು.


ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅರಚಿಕೊಳ್ಳಿರಿ! ಅಯ್ಯೋ ದಿನವೇ!


ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ,


ಆದಕಾರಣ ನಾನು ಮೋವಾಬಿನ ನಿವಿುತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವದು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನೀನು ತಪ್ಪಿಸಲರಿಯದ ನಾಶನವು ನಿನಗೇ ತಟ್ಟನೆ ಉಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು