Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:11 - ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು ಅವನಿಗೆ ಬೇಡಿ ಹಾಕಿ ಬಾಬೆಲಿಗೆ ತೆಗೆದುಕೊಂಡು ಹೋಗಿ ಅವನು ಜೀವದಿಂದಿರುವವರೆಗೆ ಸೆರೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:11
7 ತಿಳಿವುಗಳ ಹೋಲಿಕೆ  

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರ್ಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯ ದೇಶದ ಬಾಬೆಲಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಯಾಜಕನನ್ನೂ ಧಿಕ್ಕರಿಸಿದ್ದಾನೆ.


ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು