Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:12 - ಕನ್ನಡ ಸತ್ಯವೇದವು J.V. (BSI)

12 ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:12
16 ತಿಳಿವುಗಳ ಹೋಲಿಕೆ  

ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ಹದಿನೆಂಟನೆಯ ವರುಷದಲ್ಲಿ ಎಂಟುನೂರು ಮೂವತ್ತೆರಡು ಜನರನ್ನು ಯೆರೂಸಲೇವಿುನಿಂದ ಸೆರೆಯೊಯ್ದನು;


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.


ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.


ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬೆಲಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬೆಲಿಗೆ ಒಯ್ದನು.


ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.


ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.


ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರುಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇವಿುಗೆ ಬಂದು ಮುತ್ತಿಗೆ ಹಾಕಿದನು.


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಯೆರೂಸಲೇವಿುನವರು ಸೆರೆಹೋಗುವ ತನಕ ಯೆಹೋವನ ವಾಕ್ಯವು ಒದಗುತ್ತಿತ್ತು.


ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -


ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು