Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:19 - ಕನ್ನಡ ಸತ್ಯವೇದವು J.V. (BSI)

19 ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಗೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಬೋಗುಣಿಗಳನ್ನು, ಧೂಪಾರತಿಗಳನ್ನು, ದೊಡ್ಡ ಬಟ್ಟಲುಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:19
9 ತಿಳಿವುಗಳ ಹೋಲಿಕೆ  

ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.


ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು; ನೀವು ನನಗೆ ಪ್ರಜೆಯಾಗಿರುವಿರಿ.


ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು