Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:27 - ಕನ್ನಡ ಸತ್ಯವೇದವು J.V. (BSI)

27 ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:27
28 ತಿಳಿವುಗಳ ಹೋಲಿಕೆ  

ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.


ಕೋಟೆಕೊತ್ತಲದ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯನಿವಾಸಸ್ಥಾನವಾಗಿದೆ; ಅಲ್ಲಿ ಕರು ಮೇದು ಮಲಗುವದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವದು.


ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬರಲು ಆ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ


ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.


ಏಕಂದರೆ ಯೆಹೋವನು - ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ಅದನ್ನು ಕಣ್ಣಾರೆ ಕಾಣುವಿ; ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಭೂವಿುಯು ಬಟ್ಟಬರಿದಾಗುವದು, ಲೋಕಕ್ಕೆ ಸಂಪೂರ್ಣ ಸುಲಿಗೆಯಾಗುವದು; ಯೆಹೋವನೇ ಇದನ್ನು ನುಡಿದಿದ್ದಾನೆ.


ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ಆದಕಾರಣ ನಾನು ಪವಿತ್ರಾಲಯದ ಅಧಿಪತಿಗಳನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ ಇಸ್ರಾಯೇಲನ್ನು ದೂಷಣೆಗೂ ಗುರಿಮಾಡಿದೆನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು