Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:29 - ಕನ್ನಡ ಸತ್ಯವೇದವು J.V. (BSI)

29 ಹದಿನೆಂಟನೆಯ ವರುಷದಲ್ಲಿ ಎಂಟುನೂರು ಮೂವತ್ತೆರಡು ಜನರನ್ನು ಯೆರೂಸಲೇವಿುನಿಂದ ಸೆರೆಯೊಯ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಜೆರುಸಲೇಮಿನಿಂದ ಸೆರೆಗೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೆಬೂಕದ್ನೆಚ್ಚರನ ಹದಿನೆಂಟನೇ ವರ್ಷದಲ್ಲಿ ಜೆರುಸಲೇಮಿನಿಂದ 832.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಅವನು ಯೆರೂಸಲೇಮಿನಿಂದ ಸೆರೆಗೊಯ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:29
9 ತಿಳಿವುಗಳ ಹೋಲಿಕೆ  

ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು


ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲಿಗೆ ಸೆರೆಯೊಯ್ದನು. ಪಾರಸಿಯ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಯಾಕೋಬನಿಂದ ಹುಟ್ಟಿದವರೆಲ್ಲರು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.


ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ - ಅವನು ತನ್ನ ಆಳಿಕೆಯ ಏಳನೆಯ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು;


ನೆಬೂಕದ್ನೆಚ್ಚರನ ಆಳಿಕೆಯ ಇಪ್ಪತ್ತು ಮೂರನೆಯ ವರುಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.


ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಹತ್ತನೆಯ ವರುಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು