Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:4 - ಕನ್ನಡ ಸತ್ಯವೇದವು J.V. (BSI)

4 ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:4
22 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿಹೋದರು; (ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು); ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನಮಾಡಿದರು.


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳುಕೊಳ್ಳಲಿಲ್ಲವಾದದರಿಂದ ನಿನ್ನ ವೈರಿಗಳು ಒಡ್ಡುಕಟ್ಟಿ ನಿನ್ನ ಸುತ್ತಲೂ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಲ್ಲಿಯೂ ನಿನ್ನನ್ನು ಬಂದುಮಾಡಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.


ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ನಾನು ನಿನ್ನ ಸುತ್ತಲು ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲಕಟ್ಟಿ ದಿಬ್ಬಹಾಕಿ ನಿನ್ನನ್ನು ಮುತ್ತುವೆನು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಅವನು ಬೈಲುಭೂವಿುಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ ದಿಬ್ಬಹಾಕಿ


ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.


ನಾವು ಸೆರೆಯಾದ ಇಪ್ಪತ್ತೈದನೆಯ ವರುಷದ ಅಂದರೆ ಪಟ್ಟಣವು ಹಾಳಾದ ಹದಿನಾಲ್ಕನೆಯ ವರುಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ, ಹೌದು, ಆ ದಿನದಲ್ಲೇ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನ್ನನ್ನು ಅಲ್ಲಿಗೆ ಒಯ್ದನು.


ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ.


ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು