Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:9 - ಕನ್ನಡ ಸತ್ಯವೇದವು J.V. (BSI)

9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬರಲು ಆ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:9
15 ತಿಳಿವುಗಳ ಹೋಲಿಕೆ  

ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ತಗಲಿ ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು; ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಅನಂತರ ಕಸ್ದೀಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ,


ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.


ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೊರಟು ಅದನ್ನು ಸ್ವಾಧೀನಮಾಡಿಕೊಂಡು


ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅಲ್ಲಿಂದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು