Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:11 - ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:11
22 ತಿಳಿವುಗಳ ಹೋಲಿಕೆ  

ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ಆ ರಾತ್ರಿಯಲ್ಲಿ ಒಂದೇ ಮಂಚದ ಮೇಲೆ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು.


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.


ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ; ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕೂತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ಆಗ ಆತನು ನನಗೆ - ನರಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ; ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸಮಾಡಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು