Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:13 - ಕನ್ನಡ ಸತ್ಯವೇದವು J.V. (BSI)

13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:13
32 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇವಿುನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲ್ಯರೂ ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ಯೆಹೋವನು ಹೀಗನ್ನುತ್ತಾನೆ - ಏಕೆ ನನ್ನೊಡನೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು; ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.


ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ


ಸೀಮೆಯು ಸೂಳೆಗಾರರಿಂದ ತುಂಬಿದೆ, ದೈವಶಾಪದ ನಿವಿುತ್ತ ದೇಶವು ದುಃಖಿಸುತ್ತದೆ; ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವರ ಶೌರ್ಯವು ಅನ್ಯಾಯಸಾಧಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು