Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:17 - ಕನ್ನಡ ಸತ್ಯವೇದವು J.V. (BSI)

17 ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:17
19 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.


ದೂಮದ ವಿಷಯವಾದ ದೈವೋಕ್ತಿ. ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು, ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು ಎಂಬ ಕೂಗು ಸೇಯೀರಿನಿಂದ ನನಗೆ ಕೇಳಿಸುತ್ತಿತ್ತು.


ನನ್ನ ಕೋವರದಲ್ಲಿ ನಿಂತುಕೊಳ್ಳುವೆನು, ಬುರುಜಿನ ಮೇಲೆ ನೆಲೆಯಾಗಿರುವೆನು, ಯೆಹೋವನು ನನಗೆ ಏನು ಹೇಳುವನೋ, ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರಕೊಡಬೇಕೋ ಎಂದು ಎದುರು ನೋಡುವೆನು [ಅಂದುಕೊಂಡೆನು].


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!


ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


ಅವರೋ - ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು ಎಂದು ಹೇಳುತ್ತಾರೆ.


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು