ಯೆರೆಮೀಯ 6:2 - ಕನ್ನಡ ಸತ್ಯವೇದವು J.V. (BSI)2 ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸುಂದರವೂ, ಸೊಂಪಾದ ಹಸಿರುಗಾವಲಿಗೆ ಸಮಾನವೂ ಆದ ಸಿಯೋನ್ ನಗರ ನಾಶವಾಗಲಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಚೀಯೋನ್ ಕುಮಾರಿಯೇ, ನೀನು ಬಹು ಸುಂದರವಾಗಿಯೂ ಮೃದುವಾಗಿಯೂ ಇರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸುಂದರಿ ಮತ್ತು ಕೋಮಲಳಾದ ಚೀಯೋನಿನ ಮಗಳನ್ನು ನಾನು ನಾಶಮಾಡುತ್ತೇನೆ. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು.