ಯೆರೆಮೀಯ 6:21 - ಕನ್ನಡ ಸತ್ಯವೇದವು J.V. (BSI)21 ಆದಕಾರಣ ಇಗೋ, ನಾನು ಈ ಜನರ ಮುಂದೆ ಆಟಂಕಗಳನ್ನು ಒಡ್ಡುವೆನು; ತಂದೆಗಳೂ ಮಕ್ಕಳೂ ಅವುಗಳನ್ನು ಎಡವುವರು, ನೆರೆಹೊರೆಯವರೂ ನಾಶವಾಗುವರು. ಇದೇ ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.” ಅಧ್ಯಾಯವನ್ನು ನೋಡಿ |