Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:22 - ಕನ್ನಡ ಸತ್ಯವೇದವು J.V. (BSI)

22 ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:22
18 ತಿಳಿವುಗಳ ಹೋಲಿಕೆ  

ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


[ಚೀಯೋನೇ] ಕಣ್ಣೆತ್ತು, ಬಡಗಲಿಂದ ಬರುವವರನ್ನು ನೋಡು; ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ಇಗೋ, ಜನಾಂಗಗಳಿಗೆ ಅರುಹಿರಿ, ಮುತ್ತುವವರು ದೂರದೇಶದಿಂದ ಯೆರೂಸಲೇವಿುಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿಗೈಯುತ್ತಾರೆ, ಎಂದು ಪ್ರಚುರಪಡಿಸಿರಿ.


ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.


ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು