Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:28 - ಕನ್ನಡ ಸತ್ಯವೇದವು J.V. (BSI)

28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿಹೇಳುತ್ತಾ ತಿರುಗಾಡುವವರು; ಅವರು [ಬೆಳ್ಳಿಯಲ್ಲಾ,] ತಾಮ್ರ, ಕಬ್ಬಿಣ; ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:28
19 ತಿಳಿವುಗಳ ಹೋಲಿಕೆ  

ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟದ್ದರಿಂದ ಕಂದುಬೆಳ್ಳಿಯೆನಿಸಿಕೊಳ್ಳುವರು ಎಂದು ಹೇಳಿದ್ದಾನೆ.


ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.


ಸಹೋದರನನ್ನು ಕ್ಷುದ್ರಮಾಡುತ್ತಾ ಕೂತುಕೊಳ್ಳುತ್ತೀರಿ; ಒಡಹುಟ್ಟಿದವರನ್ನು ದೂರುತ್ತೀರಿ.


ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ಅವನು ಆ ಕಲ್ಲುಗಳನ್ನು ತೆಗಿಸಿ ಮನೆಯ ಗೋಡೆಗಳನ್ನು ಗೀಚಿಸಿ ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ನೋಡಬೇಕು.


ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯ ಕೃತ್ಯಗಳನ್ನು ನಡಿಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ; ಚಾಡಿಗಾರನು ಜ್ಞಾನಹೀನ.


ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು