Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:30 - ಕನ್ನಡ ಸತ್ಯವೇದವು J.V. (BSI)

30 ಯೆಹೋವನಾದ ನಾನು ಇವರನ್ನು ನೂಕಿಬಿಟ್ಟದ್ದರಿಂದ ಕಂದುಬೆಳ್ಳಿಯೆನಿಸಿಕೊಳ್ಳುವರು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವುದು; ಏಕೆಂದರೆ, ಯೆಹೋವ ದೇವರು ಅವರನ್ನು ತಳ್ಳಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:30
16 ತಿಳಿವುಗಳ ಹೋಲಿಕೆ  

ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವದು.


ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಾಯಿತು.


ಭೂಲೋಕದ ದುಷ್ಟರೆಲ್ಲರನ್ನು ಕಿಟ್ಟದಂತೆ ತೆಗೆದುಬಿಡುತ್ತೀ; ಆದದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.


ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.


ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವದು;


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.


ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು