ಯೆರೆಮೀಯ 6:7 - ಕನ್ನಡ ಸತ್ಯವೇದವು J.V. (BSI)7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ. ಅಧ್ಯಾಯವನ್ನು ನೋಡಿ |