ಯೆರೆಮೀಯ 7:11 - ಕನ್ನಡ ಸತ್ಯವೇದವು J.V. (BSI)11 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |