ಯೆರೆಮೀಯ 7:13 - ಕನ್ನಡ ಸತ್ಯವೇದವು J.V. (BSI)13 ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.