Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:2 - ಕನ್ನಡ ಸತ್ಯವೇದವು J.V. (BSI)

2 ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು - ಯೆಹೋವನಿಗೆ ಅಡ್ಡಬೀಳುವದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: “‘ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಧಿಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:2
38 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಇದಲ್ಲದೆ ಯೆರೆಮೀಯನು ಹೆಂಗಸರಿಗೂ ಎಲ್ಲಾ ಜನರಿಗೂ ಹೀಗೆ ಹೇಳಿದನು - ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ -


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ [ಯೆರೂಸಲೇವಿುನ] ಜನರಿಗೂ ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಕೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ - [ನೀನು ಕೇಳಿ ಕೈಕೊಂಡರೆ] ಖಡ್ಗದಿಂದ ಹತನಾಗುವದಿಲ್ಲ; ಸುಖವಾಗಿ ಸಾಯುವಿ;


ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು -


ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;


ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಹಿರೀಸಭೆಯ ಎದುರಿನಿಂದ ಹೊರಟುಹೋಗಿ ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ವಿಷಯವಾದ ಶುಭವರ್ತಮಾನವನ್ನು ಸಾರುತ್ತಾ ಇದ್ದರು.


ನೀವು ಹೋಗಿ ದೇವಾಲಯದಲ್ಲಿ ನಿಂತುಕೊಂಡು ಈ ಸಜ್ಜೀವವಿಷಯವಾದ ಮಾತುಗಳನ್ನೆಲ್ಲಾ ಜನರಿಗೆ ಹೇಳಿರಿ ಅಂದನು.


ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ಕಿವಿಯುಳ್ಳವನು ಕೇಳಲಿ ಅಂದನು.


ನ್ಯಾಯಕ್ಕೆ ಅಸಹ್ಯಪಟ್ಟು ನೆಟ್ಟಗಿರುವದನ್ನು ಸೊಟ್ಟಗೆ ಮಾಡುವ ಯಾಕೋಬ್ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧ್ಯಕ್ಷರೇ,


ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ.


ಯೆರೂಸಲೇಮೇ, ನಮ್ಮ ಕಾಲುಗಳು ನಿನ್ನ ಬಾಗಲುಗಳಲ್ಲಿ ಸೇರಿರುತ್ತವಲ್ಲಾ!


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು - ಈ ನಿಬಂಧನವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.


ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ತಗ್ಗಿನಲ್ಲಿ ಇಳಿಸಿ


ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು