ಯೆರೆಮೀಯ 7:20 - ಕನ್ನಡ ಸತ್ಯವೇದವು J.V. (BSI)20 ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |