ಯೆರೆಮೀಯ 7:22 - ಕನ್ನಡ ಸತ್ಯವೇದವು J.V. (BSI)22 ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನೂ ಕೊಡಲಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ ದಹನಬಲಿಯ ವಿಷಯವಾಗಿಯಾಗಲಿ, ಯಜ್ಞಬಲಿಯ ವಿಷಯವಾಗಿಯಾಗಲಿ ನಾನು ಅವರಿಗೆ ಏನೂ ಹೇಳಲಿಲ್ಲ; ಯಾವ ಕಟ್ಟಳೆಯನ್ನೂ ಕೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಅಧ್ಯಾಯವನ್ನು ನೋಡಿ |