Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:26 - ಕನ್ನಡ ಸತ್ಯವೇದವು J.V. (BSI)

26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:26
44 ತಿಳಿವುಗಳ ಹೋಲಿಕೆ  

ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪಿತೃಗಳಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಒಳ್ಳೇದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡಿರಿ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕೂ ಉಪದೇಶ ಹೊಂದಲಿಕ್ಕೂ ಒಪ್ಪಲಿಲ್ಲ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯಜನರು, ಇವರಿಗೆಲ್ಲ ನಿನ್ನ ಹೆಸರಿನ ಮೇಲೆ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.


ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಿಮ್ಮ ಕೈ ಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ಕೇಡನ್ನು ತಂದುಕೊಂಡಿದ್ದೀರಿ.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು.


ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;


ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು?


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಹೊಲಸುಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?


ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.


ನಿಮ್ಮ ಪಿತೃಗಳ ಕಾಲದಿಂದಲೂ ನೀವು ನನ್ನ ವಿಧಿಗಳಿಗೆ ಓರೆಯಾದಿರಿ, ಅವುಗಳನ್ನು ಅನುಸರಿಸಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಯಾವ ವಿಷಯದಲ್ಲಿ ತಿರುಗೋಣವೆನ್ನುತ್ತೀರಾ?


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ಆತನಿಂದ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಜನಾಂಗಗಳಂತೆಯೇ ನೀವೂ ನಾಶವಾಗಿ ಹೋಗುವಿರಿ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ ನನ್ನ ಮಾತನ್ನು ಕೇಳದೆ ಆ ಧರ್ಮಮಾರ್ಗದಲ್ಲಿ ನಡೆಯದೆ


ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.


ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.


ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು