Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:32 - ಕನ್ನಡ ಸತ್ಯವೇದವು J.V. (BSI)

32 ಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಸಂಹಾರದ ತಗ್ಗು ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದ್ದರಿಂದ ಇಗೋ, ಆ ಕಣಿವೆಗೆ ತೋಫೆತ್ ಮತ್ತು ಬೆನ್‍ಹಿನ್ನೋಮ್ ಎಂಬ ಹೆಸರುಗಳು ಹೋಗಿ ಸಂಹಾರದ ಕಣಿವೆ ಎಂದು ಕರೆಯಲಾಗುವ ದಿನಗಳು ಬರಲಿವೆ. ಇನ್ನೆಲ್ಲೂ ಸ್ಥಳವಿಲ್ಲವಾಗಿ ಶವಗಳನ್ನು ಆ ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಹೀಗಿರಲು ನಾನು ಈ ಕಣಿವೆಯನ್ನು ತೋಫೆತ್ ಮತ್ತು ಬೆನ್‌ಹಿನ್ನೊಮೀನ ಕಣಿವೆ ಎಂದು ಕರೆಯದೆ ಇದನ್ನು ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಬರುತ್ತಿವೆ ಎಂಬ ಎಚ್ಚರಿಕೆಯನ್ನು ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನ್ನು ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನ್ನು ಹೂಳುವ ಕಾರಣ ಅದಕ್ಕೆ ಈ ಹೆಸರನ್ನು ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:32
10 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.


ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವದು;


ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ; ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್‍ಹಿನ್ನೋಮ್ ತಗ್ಗಿಗೆ ಹೋಗಿ ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು -


ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.


ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು