ಯೆರೆಮೀಯ 7:6 - ಕನ್ನಡ ಸತ್ಯವೇದವು J.V. (BSI)6 ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ; ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.