Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:9 - ಕನ್ನಡ ಸತ್ಯವೇದವು J.V. (BSI)

9 ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:9
46 ತಿಳಿವುಗಳ ಹೋಲಿಕೆ  

ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಆದರೆ ಅಂಥವುಗಳನ್ನು ನಡಿಸುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವದೆಂದು ಬಲ್ಲೆವು.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಇವನ ತಂದೆಯೋ ಸ್ವಕುಲದವರನ್ನು ಬಹಳವಾಗಿ ಅರೆದು ಸುಲಿದು ಸ್ವಜನರ ನಡುವೆ ಕೆಟ್ಟದನ್ನು ನಡಿಸಿದ ಕಾರಣ ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು.


ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.


ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ನಿಮ್ಮ ಪಿತೃಗಳು, ಯೆಹೂದದ ಅರಸರು, ಅವರ ಹೆಂಡಿರು, ನೀವು, ನಿಮ್ಮ ಹೆಂಡಿರು, ಇವರೆಲ್ಲರೂ ಯೆಹೂದದೇಶದಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ನಡಿಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?


ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲ ಮಾಡುವೆನು. ಇದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ತಮ್ಮ ಮಕ್ಕಳನ್ನು ಕೊಂದು ತಮ್ಮ ಬೊಂಬೆಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಹೊಲೆಗೈದರು; ಇಗೋ, ನನ್ನ ಮಂದಿರದ ನಟ್ಟನಡುವೆ ಇದನ್ನು ನಡಿಸಿದರು.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್‍ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.


ಡಕಾಯಿತಿಯವರು ಒಬ್ಬನಿಗೆ ಹೊಂಚುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು ಶೆಕೆವಿುಗೆ ಹೋಗುವವರನ್ನು ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡಿಸುತ್ತಾರೆ.


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಹೊಲಸುಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು