Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:14 - ಕನ್ನಡ ಸತ್ಯವೇದವು J.V. (BSI)

14 [ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:14
23 ತಿಳಿವುಗಳ ಹೋಲಿಕೆ  

ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.


ಆಹಾ, ನಾನು ಈ ಜನರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು.


ನಾನು ಅಲೆದು ಕಷ್ಟಪಟ್ಟದ್ದನ್ನು ಚಿತ್ತಕ್ಕೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕ ಮಾಡಿಕೋ,


ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು.


ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.


ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು.


ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.


ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಯೆಹೋವನೋ ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.


ಸುಡಲು ಬಂದ ದಾಯಾದಿಯು ಒಂದು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋಗಬೇಕೆಂದು ಅದನ್ನೆತ್ತಿ - ನಿನ್ನ ಹತ್ತಿರ ಇನ್ನು ಯಾರಾದರೂ ಇದ್ದಾರೋ ಎಂದು ಒಳಮನೆಯಲ್ಲಿರುವವನನ್ನು ಕೇಳುವಾಗ ಅವನು ಇಲ್ಲವೆನ್ನಲು ಇವನು ಯೆಹೋವನ ಹೆಸರನ್ನು ಎತ್ತಾನೆಂದು ದಾಯಾದಿಯು ಭಯಪಟ್ಟು ಸುಮ್ಮನಿರು ಎಂದು ಅವನನ್ನು ತಡೆಯುವನು.


ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.


ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.


ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಾಗಿದ್ದಾರೆ; ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ಹಣ್ಣಿನ ಗೊಂಚಲು ವಿಷ;


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.


ಸ್ವಂತ ಹೃದಯದ ಹಟದಂತೆ ನಡೆದು ತಮ್ಮ ಪಿತೃಗಳು ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು