Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನು - ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು ಎಂದು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ : “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಬಿಡುವೆನು. ಅವು ಮಾಯಮಂತ್ರಕ್ಕೆ ಬಾಗದ ನಾಗಸರ್ಪಗಳು ! ಅವು ನಿಮ್ಮನ್ನು ಕಚ್ಚದೆ ಬಿಡವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:17
9 ತಿಳಿವುಗಳ ಹೋಲಿಕೆ  

ಮಂತ್ರಿಸಿ ತಡೆಯುವದರೊಳಗಾಗಿ ಹಾವು ಕಚ್ಚಿದರೆ ಮಂತ್ರಿಸುವವನಿಗೆ ಏನು ಪ್ರಯೋಜನ?


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ಅದಕ್ಕೆ ಯೆಹೋವನು ಉರಿಮಂಡಲಗಳನ್ನು ಜನರೊಳಗೆ ಬರಮಾಡಿದನು; ಅವು ಜನರನ್ನು ಕಚ್ಚಿದ್ದರಿಂದ ಬಹುಜನ ಸತ್ತುಹೋದರು.


ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಕೇಡನ್ನುಂಟುಮಾಡುತ್ತವೆ.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;


ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೇದಾಡೆಗಳನ್ನು ಕಿತ್ತುಹಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು