Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:2 - ಕನ್ನಡ ಸತ್ಯವೇದವು J.V. (BSI)

2 ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:2
32 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೂದ ಪ್ರಾಂತದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಸುತ್ತಣ ಪ್ರದೇಶದಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳನಿಗೂ ಸೂರ್ಯಚಂದ್ರನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಸುಡುವದಕ್ಕಾಗಿ ಯೆಹೂದರಾಜರಿಂದ ನೇವಿುಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.


ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಯೆಹೋವನ ಈ ಮಾತನ್ನು ಸಾರು ಎಂದು ನನಗೆ ಅಪ್ಪಣೆಯಾಯಿತು - ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವವು; ಅವು ಹೊಲಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವವು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು.


ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಸರ್ವನಕ್ಷತ್ರಮಂಡಲಕ್ಕೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಅನ್ಯದೇವರುಗಳನ್ನಾಗಲಿ ಇಲ್ಲವೆ ಪೂಜಿಸಬಾರದೆಂದು ಆತನು ನಿಷೇಧಿಸಿರುವ ಸೂರ್ಯಚಂದ್ರನಕ್ಷತ್ರಗಳನ್ನಾಗಲಿ ಸೇವಿಸಿ ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದುಷ್ಟವಾದದ್ದನ್ನು ನಡಿಸಿದರೆ


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮಖಡ್ಗಗಳ ದೆಸೆಯಿಂದ ಯೆರೂಸಲೇವಿುನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡರುಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.


ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ


ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.


ನಾನು ಇಸ್ರಾಯೇಲ್ಯರ ಶವಗಳನ್ನು ಅವರ ಬೊಂಬೆಗಳ ಮುಂದೆ ಹಾಕಿ ನಿಮ್ಮ ಯಜ್ಞವೇದಿಗಳ ಸುತ್ತಲು ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.


ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು; ನೀನು ಬೈಲಿನಲ್ಲಿ ಬಿದ್ದಿರುವಿ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಾನು ನಿನ್ನನ್ನು ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ಓರೇಬ್ ಜೇಬ್ ಎಂಬವರ ಗತಿಯು ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.


ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ; ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸಮಾಡಿಸಲಿ;


ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣಿಡರು, ಭೂವಿುಯ ಮೇಲೆ ಗೊಬ್ಬರವಾಗುವರು.


ನೀವು ಬೈಲಿನಲ್ಲಿ ಬೀಳುವಿರಿ; ನಾನೇ ಅಪ್ಪಣೆಕೊಟ್ಟಿದ್ದೇನಲ್ಲಾ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು