ಯೆರೆಮೀಯ 8:22 - ಕನ್ನಡ ಸತ್ಯವೇದವು J.V. (BSI)22 ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ? ಅಧ್ಯಾಯವನ್ನು ನೋಡಿ |
ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.