ಯೆರೆಮೀಯ 8:3 - ಕನ್ನಡ ಸತ್ಯವೇದವು J.V. (BSI)3 ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’ ಅಧ್ಯಾಯವನ್ನು ನೋಡಿ |