Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:4 - ಕನ್ನಡ ಸತ್ಯವೇದವು J.V. (BSI)

4 ಮತ್ತು ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಇಂತೆನ್ನುತ್ತಾನೆ - ಬಿದ್ದವರು ಏಳದಿರುವರೋ? ಬಿಟ್ಟು ಹೋದವನು ತಿರಿಗಿ ಬರುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು ಅವರಿಗೆ ಹೀಗೆ ಹೇಳಬೇಕು : “ಸರ್ವೇಶ್ವರ ಇಂತೆನ್ನುತ್ತಾರೆ : ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ. “‘ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:4
15 ತಿಳಿವುಗಳ ಹೋಲಿಕೆ  

ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ, ಮತ್ತೆ ಏಳಳು; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನೆತ್ತಲು ಯಾರೂ ಇಲ್ಲ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ, ಆತನನ್ನು ಆಶ್ರಯಿಸಲಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು