Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:6 - ಕನ್ನಡ ಸತ್ಯವೇದವು J.V. (BSI)

6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:6
24 ತಿಳಿವುಗಳ ಹೋಲಿಕೆ  

ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ


ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಮನುಷ್ಯನು ದೇವರನ್ನು ಕುರಿತು - ನಾನು ಕೆಟ್ಟದ್ದನ್ನು ಮಾಡದಿದ್ದರೂ [ದಂಡನೆಯನ್ನು] ಸಹಿಸಿಕೊಂಡಿದ್ದೇನೆ,


ನಾನು ಕಾಣದಿರುವದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮಾಡುವದಿಲ್ಲ ಎಂದು ಹೇಳುವದಕ್ಕಾದೀತೇ?


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಆತನು ನಿತ್ಯವಾಗಿ ಕೋಪಮಾಡುವನೋ? ಕೊನೆಯ ತನಕ ಇಟ್ಟುಕೊಳ್ಳುವನೋ? ಅಂದುಕೊಳ್ಳುತ್ತಿದ್ದೀ. ಇಗೋ, ನೀನು ಹೀಗೆ ಮಾತಾಡಿದರೇನು? ದುಷ್ಕೃತ್ಯಗಳನ್ನು ನಡಿಸಿ ಕೃತಾರ್ಥಳಾಗಿದ್ದೀ.


ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.


[ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು