Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:7 - ಕನ್ನಡ ಸತ್ಯವೇದವು J.V. (BSI)

7 ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:7
10 ತಿಳಿವುಗಳ ಹೋಲಿಕೆ  

ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಭೂವಿುಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ನಾನು ಕಣ್ಣೆತ್ತಿನೋಡಲು ಆಹಾ, ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು; ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು; ಅವರು ಪೀಪಾಯಿಯನ್ನು ಭೂಮ್ಯಾಕಾಶಗಳ ಅಂತರಾಳದಲ್ಲಿ ಎತ್ತಿಕೊಂಡು ಹೋದರು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು