Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:8 - ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:8
18 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ; ನಮಗೆ ಕಣ್ಣು ಕಾಣುತ್ತವೆ ಅನ್ನುತ್ತೀರಾದ್ದರಿಂದ ನಿಮ್ಮ ಪಾಪವು ಉಳಿದದೆ.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ; ತನ್ನ ನಿಯಮವಿಧಿಗಳನ್ನು ಇಸ್ರಾಯೇಲ್ಯರಿಗೆ ಪ್ರಕಟಿಸುತ್ತಾನೆ.


ಆಲೋಚನಾಕರ್ತರ ವಾಕ್ಚಾತುರ್ಯವನ್ನು ಹಾರಿಸಿ ಹಿರಿಯರ ವಿವೇಕವನ್ನು ತೆಗೆದುಹಾಕುವನು.


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ ಅವುಗಳು ತನಗೆ ಸಂಬಂಧಪಟ್ಟವುಗಳಲ್ಲವೆಂದು ಅದು ಭಾವಿಸುತ್ತದೆ.


ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ; ಹೆತ್ತವರು ಮಕ್ಕಳಿಗೆ ಭೂಷಣ.


ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಜಳ್ಳುಮನುಷ್ಯನು ಬುದ್ಧಿಯನ್ನು ಪಡೆದಾನು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು ಎಂದು ನೀವು ಅಂದುಕೊಳ್ಳುವದು ಹೇಗೆ? ಮೋವಾಬು ಹಾಳಾಗಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು