Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:10 - ಕನ್ನಡ ಸತ್ಯವೇದವು J.V. (BSI)

10 ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:10
30 ತಿಳಿವುಗಳ ಹೋಲಿಕೆ  

ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.


ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ಯಾವ ಪಶುವೂ ತುಳಿದು ದಾಟಿಹೋಗದು; ನಾಲ್ವತ್ತು ವರುಷ ನಿರ್ಜನವಾಗಿರುವದು.


ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಪಡಿಸಿ ಹಾಳುಮಾಡಿ ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ


ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ.


ಈ ವಿಪತ್ತುಗಳಿಂದ ಅಳುವೆನು, ನನ್ನನ್ನು ಸಂತೈಸಿ ದಣುವಾರಿಸತಕ್ಕವನು ದೂರವಾಗಿರುವದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ಸೀಮೆಯು ಸೂಳೆಗಾರರಿಂದ ತುಂಬಿದೆ, ದೈವಶಾಪದ ನಿವಿುತ್ತ ದೇಶವು ದುಃಖಿಸುತ್ತದೆ; ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವರ ಶೌರ್ಯವು ಅನ್ಯಾಯಸಾಧಕ.


ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ಅಸುರುಸುರಾಗುತ್ತಾ ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.


ಅಯ್ಯೋ, ನನ್ನ ದುಃಖಕ್ಕೆ ಬೆಳಗೆಂದಿಗಾದೀತು? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂವಿುಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವದೆಂದರೆ - ನೋಡು, ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ,


ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ.


ಒಂದು ಜನಾಂಗವು ಬಡಗಲಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕಗೀತವನ್ನೆತ್ತು, ಅದಕ್ಕೆ ಹೀಗೆ ನುಡಿ -


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಯೆಹೋವಾ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆಯಲ್ಲಾ; ವನವೃಕ್ಷಗಳನ್ನೆಲ್ಲಾ ಬೇಗೆಯು ಸುಟ್ಟುಹಾಕಿದೆ.


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಎತ್ತುವ ಈ ಮಾತನ್ನು ಕೇಳಿರಿ -


ಸೇನಾಧೀಶ್ವರದೇವರಾದ ಯೆಹೋವಕರ್ತನು ಇಂತೆನ್ನುತ್ತಾನೆ - ಎಲ್ಲಾ ಚೌಕಗಳಲ್ಲಿ ಕಿರಿಚಾಟವಾಗುವದು, ಸಕಲ ಬೀದಿಗಳಲ್ಲಿ ಅಯ್ಯಯ್ಯೋ ಎಂದು ಅರಚಿಕೊಳ್ಳುವರು; ರೈತರನ್ನು ಪ್ರಲಾಪಿಸುವದಕ್ಕೂ ಗೋಳಾಟದವರನ್ನು ಗೋಳಿಡುವದಕ್ಕೂ ಕರೆಯುವರು.


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಪದ್ಯವನ್ನೆತ್ತಿ - ಅಯ್ಯೋ, ನಾವು ತೀರಾ ಸೂರೆ ಹೋದೆವಲ್ಲಾ! [ಯೆಹೋವನು] ನಮ್ಮವರ ಸ್ವಾಸ್ತ್ಯವನ್ನು ಪರಾಧೀನಮಾಡಿದ್ದಾನೆ; ಅಕಟಾ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ! ನಮ್ಮ ಭೂವಿುಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ ಎಂದು ಶೋಕಗೀತವಾಗಿ ಹಾಡುವರು.


ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ.


ಹೌದು, ಹಾಳು ಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾವನೂ ಮನಸ್ಸಿಗೆ ತಾರದ್ದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ಇದರಿಂದ ನಮ್ಮ ಹೃದಯವು ಕುಂದಿದೆ, ಇದರಿಂದ ನಮ್ಮ ಕಣ್ಣು ಮೊಬ್ಬಾಗಿದೆ.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು,


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು