Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:11 - ಕನ್ನಡ ಸತ್ಯವೇದವು J.V. (BSI)

11 ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:11
32 ತಿಳಿವುಗಳ ಹೋಲಿಕೆ  

ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.


ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು.


ಅರಮನೆಗಳಲ್ಲಿ ತೋಳಗಳೂ, ವಿಲಾಸಮಂದಿರಗಳಲ್ಲಿ ನರಿಗಳೂ ಎದುರುಬದುರಾಗಿ ಕೂಗುವವು; ಅದಕ್ಕೆ ಹೊತ್ತು ಸಮೀಪಿಸಿದೆ, ಇನ್ನು ದಿನ ಹೆಚ್ಚದು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಭಯವೂ ಗುಂಡಿಯೂ ಸಂಹಾರವೂ ಭಂಗವೂ ನಮಗೆ ಕಾದಿವೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು.


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು.


ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ - ಈ ಆಲಯವು ಶಿಲೋವಿನ ಗತಿಗೆ ಬರುವದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವದು ಎಂದು ಏಕೆ ನುಡಿದೆ ಅಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.


ಯೆರೂಸಲೇವಿುಗೂ ಯೆಹೂದದ ಪಟ್ಟಣಗಳಿಗೂ ಅರಸರಿಗೂ ಪ್ರಧಾನರಿಗೂ ಕುಡಿಸಿದೆನು; ಇದರಿಂದ ಅವರು ಹಾಳಾಗಿ ಬೆರಗಿನ ಸಿಳ್ಳಿಗೂ ಶಾಪಕ್ಕೂ ಗುರಿಯಾಗುವದಕ್ಕೆ ಆಸ್ಪದವಾಯಿತು.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ಒಕ್ಕಲಾಗುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.


ನೀನು ನಮ್ಮನ್ನು ಪರಾಜಯಪಡಿಸಿ ನಮ್ಮ ದೇಶವನ್ನು ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಕಾರ್ಗತ್ತಲು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?


ಇಗೋ, ನಾನು ಬಡಗಣ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇವಿುನ ಊರು ಬಾಗಲುಗಳ ಎದುರಿನಲ್ಲಿಯೂ ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ಯೆಹೋವನು ಹೀಗನ್ನುತ್ತಾನೆ - ದೇಶವೆಲ್ಲಾ ಬಟ್ಟಬರಿದಾಗುವದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ಯೆರೂಸಲೇವಿುಗೂ ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ;


ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.


ಒಂದು ಜನಾಂಗವು ಬಡಗಲಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು