ಯೆರೆಮೀಯ 9:2 - ಕನ್ನಡ ಸತ್ಯವೇದವು J.V. (BSI)2 ಅಕಟಾ, ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೇದು! ಆಗ ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ಸೂಳೆಗಾರರು, ದ್ರೋಹಿಗಳ ಗುಂಪೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ. ಅಧ್ಯಾಯವನ್ನು ನೋಡಿ |