Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:20 - ಕನ್ನಡ ಸತ್ಯವೇದವು J.V. (BSI)

20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ; ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸಮಾಡಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:20
15 ತಿಳಿವುಗಳ ಹೋಲಿಕೆ  

ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.


ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ


ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇವಿುಸುವೆನು, ಬಾಲಚೇಷ್ಟೆಯು ಅದನ್ನಾಳುವದು.


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.


ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮಖಡ್ಗಗಳ ದೆಸೆಯಿಂದ ಯೆರೂಸಲೇವಿುನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡರುಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು