ಯೆರೆಮೀಯ 9:24 - ಕನ್ನಡ ಸತ್ಯವೇದವು J.V. (BSI)24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |