ಯೆರೆಮೀಯ 9:5 - ಕನ್ನಡ ಸತ್ಯವೇದವು J.V. (BSI)5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |