Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:6 - ಕನ್ನಡ ಸತ್ಯವೇದವು J.V. (BSI)

6 ನಿಮ್ಮ ನಿವಾಸವು ಮೋಸದೊಳಗೇ ಇದೆ; ಅಯ್ಯೋ, ಮೋಸಗಾರರಾಗಿರುವದರಿಂದ ನನ್ನನ್ನು ಅರಿಯಲೊಲ್ಲರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:6
21 ತಿಳಿವುಗಳ ಹೋಲಿಕೆ  

ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಹೆಚ್ಚಿ ಧನವಂತರಾಗಿದ್ದಾರೆ.


ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.


ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ಗಮನಿಸಲಿಲ್ಲ;


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು