Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:7 - ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:7
22 ತಿಳಿವುಗಳ ಹೋಲಿಕೆ  

ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ಯೆಹೋವನು ನನಗೆ - ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇವಿುಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.


ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ ಸಾವಕಾಶಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಇದ್ದರೂ


ಆಗ ಅಬ್ಷಾಲೋಮನು - ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನಮ್ಮೊಡನೆ ಕಳುಹಿಸು ಅಂದನು. ಅದಕ್ಕೆ ಅರಸನು - ಅವನೇಕೆ ನಿನ್ನ ಸಂಗಡ ಬರಬೇಕು ಎಂದು ಕೇಳಿದನು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.


ಶೂರನ ಹದವಾದ ಬಾಣಗಳನ್ನೂ ಜಾಲಿಯ ಕೆಂಡಗಳನ್ನೂ ನಿನಗೆ ಕೊಡಲಿ.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು