Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:9 - ಕನ್ನಡ ಸತ್ಯವೇದವು J.V. (BSI)

9 ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗಿರಲು ನಾನು ಯೆಹೂದದ ಜನರನ್ನು ಶಿಕ್ಷಿಸಬಾರದೇ?” ಇದು ದೇವರಿಂದ ಬಂದ ಮಾತು. “ಅಂಥಾ ಜನರನ್ನು ನಾನು ಶಿಕ್ಷಿಸಬೇಕೆಂಬುದು ನಿನಗೆ ಗೊತ್ತು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:9
12 ತಿಳಿವುಗಳ ಹೋಲಿಕೆ  

ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


[ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?


ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ಹೌದು, ಹಾಳು ಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾವನೂ ಮನಸ್ಸಿಗೆ ತಾರದ್ದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ಯೆಹೋವಾ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆಯಲ್ಲಾ; ವನವೃಕ್ಷಗಳನ್ನೆಲ್ಲಾ ಬೇಗೆಯು ಸುಟ್ಟುಹಾಕಿದೆ.


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಎತ್ತುವ ಈ ಮಾತನ್ನು ಕೇಳಿರಿ -


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ, ಮತ್ತೆ ಏಳಳು; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನೆತ್ತಲು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು