Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:11
23 ತಿಳಿವುಗಳ ಹೋಲಿಕೆ  

ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಫೀಕರಿಸುತ್ತೇನೆ; ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನಾನು ನಿಮ್ಮ ಯಜ್ಞಗಳ ವಿಷಯದಲ್ಲಿ ತಪ್ಪೆಣಿಸುವದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು [ಸಾಧಾರಣ] ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.


ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು.


ಆಗ ಹಗ್ಗಾಯನು ಆ ಪ್ರಸ್ತಾಪವೆತ್ತಿ ಹೀಗಂದನು - ಯೆಹೋವನು ಇಂತೆನ್ನುತ್ತಾನೆ - ಅದರಂತೆ ಈ ಪ್ರಜೆಯು, ಅದರಂತೆ ಈ ಜನಾಂಗವು, ಅದರಂತೆ ಇವರು ಕೈ ಹಾಕುವ ಎಲ್ಲಾ ಕೆಲಸವು, ಅಲ್ಲಿ ತಂದಿಡುವ ನ್ಯೆವೇದ್ಯವು ನನಗೆ ಅಶುದ್ಧವೇ ಸರಿ.


ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು