ಯೆಶಾಯ 1:17 - ಕನ್ನಡ ಸತ್ಯವೇದವು J.V. (BSI)17 ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.