ಯೆಶಾಯ 1:23 - ಕನ್ನಡ ಸತ್ಯವೇದವು J.V. (BSI)23 ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ. ಅಧ್ಯಾಯವನ್ನು ನೋಡಿ |