Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:26 - ಕನ್ನಡ ಸತ್ಯವೇದವು J.V. (BSI)

26 ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:26
25 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಆ ಮೋಶೆ ಭೂವಿುಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹುಸಾತ್ವಿಕನು.


ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.


ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.


ಹಿಂಡಿಗೆ ರಕ್ಷಕವಾದ ಹೂಡೆಯೇ, ಚೀಯೋನ್ ಯುವತಿಯ ಗುಡ್ಡವೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವದು, ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವದು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು