Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:29 - ಕನ್ನಡ ಸತ್ಯವೇದವು J.V. (BSI)

29 ನೀವು ಇಷ್ಟಪಟ್ಟ ಏಲಾಮರಗಳ ನಿವಿುತ್ತ ನಾಚಿಕೆಗೊಳ್ಳುವಿರಿ, ಗೊತ್ತುಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:29
17 ತಿಳಿವುಗಳ ಹೋಲಿಕೆ  

ತೋಟಗಳೊಳಗೆ ಪ್ರವೇಶಿಸುವದಕ್ಕೆ ತಮ್ಮ ಮಧ್ಯದಲ್ಲಿನ ಒಬ್ಬನ ಅಂಗಾಭಿನಯವನ್ನು ಅನುಸರಿಸಿ ತಮ್ಮನ್ನು ಶುದ್ಧೀಕರಿಸಿ ಪವಿತ್ರಮಾಡಿಕೊಂಡು ಹಂದಿಯ ಮಾಂಸವನ್ನೂ ಅಶುದ್ಧಪದಾರ್ಥವನ್ನೂ ಇಲಿಯನ್ನೂ ತಿನ್ನುವವರು ಒಟ್ಟಿಗೆ ಕೊನೆಗಾಣುವರು ಎಂದು ಯೆಹೋವನು ನುಡಿಯುತ್ತಾನೆ.


ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ


ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.


ಪರ್ವತಾಗ್ರಗಳಲ್ಲಿ ಯಜ್ಞಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪಹಾಕುತ್ತಾರೆ; ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವದರಿಂದ ಅವುಗಳ ಕೆಳಗೆ ಇವುಗಳನ್ನು ನಡಿಸುತ್ತಾರೆ; ಹೀಗಿರಲು [ನನ್ನ ಜನರೇ,] ನಿಮ್ಮ ಕುಮಾರಿಯರು ಸೂಳೆಯರಾಗಿ ನಡೆಯುವದೂ, ನಿಮ್ಮ ವಧುಗಳು ವ್ಯಭಿಚಾರಮಾಡುವದೂ ಏನಾಶ್ಚರ್ಯ?


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ಆಗ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿವಿುತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಮೂರ್ತಿಗಳನ್ನುಂಟುಮಾಡುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು, ಹೌದು, ಒಟ್ಟಿಗೆ ಅವಮಾನದಲ್ಲಿ ಮುಣುಗುವರು.


ನೀವು ನಿಮ್ಮ ಕೈಯಿಂದ ರೂಪಿಸಿಕೊಂಡಿರುವ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಟುಬಿಡುವನು; ಅವುಗಳನ್ನು ರೂಪಿಸಿದ್ದು ಪಾಪವಷ್ಟೆ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು ನೀವೇ ನಮ್ಮ ದೇವರುಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವದು; ತಾವು ಮಾಡುತ್ತಿದ್ದ ಯಜ್ಞಗಳಿಗೆ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು