ಯೆಶಾಯ 1:31 - ಕನ್ನಡ ಸತ್ಯವೇದವು J.V. (BSI)31 ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟುಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.” ಅಧ್ಯಾಯವನ್ನು ನೋಡಿ |